ಮಣಿಪುರ ಹಿಂಸಾಚಾರ- ದುಷ್ಕರ್ಮಿಗಳಿಂದ ಪೊಲೀಸ್ ಅಧಿಕಾರಿಯ ಹತ್ಯೆ; ಶಸ್ತ್ರಾಸ್ತ್ರಗಳನ್ನು ಕದ್ದು ಪರಾರಿ

(ನ್ಯೂಸ್ ಕಡಬ) newskadaba.com ಮಣಿಪುರ, ಆ. 04. ಮಣಿಪುರದಲ್ಲಿ ಹಿಂಸಾಚಾರ ಮುಂದುವರಿಯುತ್ತಲೇ ಇದ್ದು, ಇಂಫಾಲದಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿರುವ ಘಟನೆ ವರದಿಯಾಗಿದೆ.

ಪುರುಷರು ಹಾಗೂ ಮಹಿಳೆಯರನ್ನು ಒಳಗೊಂಡ ಗುಂಪೊಂದು ಪೊಲೀಸ್ ಔಟ್‌ ಪೋಸ್ಟ್ ಹಾಗೂ ತಂಗಲವಾಯ್ ಪೊಲೀಸ್ ಔಟ್‌ಪೋಸ್ಟ್‌ ನಲ್ಲಿ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಜನಸಮೂಹ ಹೀಂಗಾಂಗ್ ಹಾಗೂ ಸಿಂಗ್ಜಮೇಯಿ ಪೊಲೀಸ್ ಠಾಣೆಗಳಿಂದಲೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಆದರೆ ಭದ್ರತಾಪಡೆಗಳು ಅವರ ದಾಳಿಯನ್ನು ವಿಫಲಗೊಳಿಸಿರುವುದಾಗಿಯೂ ವರದಿಯಾಗಿದೆ.

Also Read  ತಂದೆ ಎದುರೇ ಮಗಳನ್ನು ಕಿಡ್ನಾಪ್ ಮಾಡಿದ ನಾಲ್ವರ ಗ್ಯಾಂಗ್…!

error: Content is protected !!