ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಮಿಲಿಟರಿ ಪಿಂಚಣಿ ಇಲ್ಲದ ರಾಜ್ಯದ ಮಾಜಿ ಸೈನಿಕರ ಹಾಗೂ ರಾಜ್ಯದಲ್ಲಿ ನೆಲೆಸಿರುವ ಪಿಂಚಣಿ ಪಡೆಯುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಹಾಗೂ ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೊಮಾ, ಜೆಓಸಿ, ಪ್ರೊಫೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶಿಷ್ಯ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಕಚೇರಿಯಿಂದ ಅರ್ಜಿ ಪಡೆದು, 2023ರ ಅಕ್ಟೋಬರ್ 15ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮಂಗಳೂರಿನ ಅಶೋಕ ನಗರದ ಊರ್ವ ಸ್ಟೋರ್ಸ್ ನಲ್ಲಿರುವ ಸಂಬಂಧಿಸಿದ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Also Read  ಪಿ.ಎ ಇಂಜಿನಿಯರಿಂಗ್ ಕಾಲೇಜು ಅಧ್ಯಕ್ಷರಾದ ಇಬ್ರಾಹಿಂ ಹಾಜಿ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಸಂತಾಪ

error: Content is protected !!
Scroll to Top