ನೆರೆಮನೆಯ ಮಹಿಳೆಯ ಸ್ನಾನದ ವಿಡಿಯೋ ಚಿತ್ರೀಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ನೆರೆ‌ ಮನೆಯ ಮಹಿಳೆಯೊಬ್ಬರು ಸ್ನಾನ ಮಾಡುವ ಸಂದರ್ಭ ಅದರ ವಿಡಿಯೋವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ ನಡೆದಿದ್ದು, ಶುಕ್ರವಾರದಂದು ತಡವಾಗಿ ಬೆಳಕಿಗೆ ಬಂದಿದೆ.

ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು‌ ಬಂದಿದೆ. ಬಂಧಿತ ಆರೋಪಿ ಸುಮಂತ್ ತನ್ನ ನೆರೆಮನೆಯ ಮಹಿಳೆಯೋರ್ವರು ಬಚ್ಚಲು ಕೋಣೆಯಲ್ಲಿ ಸ್ನಾನ‌ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ. ಈ ವೇಳೆ ಮಹಿಳೆ ಕಿರುಚಾಡಿದ್ದು ಕೇಳಿದ ಸ್ಥಳೀಯರು ಸುಮಂತ್ ನನ್ನು ಹಿಡಿದು ಥಳಿಸಿ, ಬಳಿಕ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಮಹಿಳೆ ಸ್ನಾನ ಮಾಡುವ ವೀಡಿಯೊ ಮಾಡಿದ್ದ ಮೊಬೈಲ್‌ ಸಹಿತ ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

Also Read  'SBI' ಗ್ರಾಹಕರಿಗೆ ಬಿಗ್ ಶಾಕ್..!! ➤ ಖಾತೆಯಿಂದ 'ಹಣ' ಕಟ್…

error: Content is protected !!
Scroll to Top