ಪ.ಜಾತಿ, ಪ.ಪಂಗಡದ ರೈತರಿಗೆ ಟಾರ್ಪಲಿನ್ ಮತ್ತು ಸೌರದೀಪಗಳನ್ನು ನೀಡಲು ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಪುತ್ತೂರಿನಲ್ಲಿರುವ ಗೇರು, ನಿರ್ದೇಶನಾಲಯವು ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಯೋಜನೆಯಡಿ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಟಾರ್ಪಲಿನ್ ಮತ್ತು ಸೌರದೀಪಗಳನ್ನು ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಅರ್ಹರು ರೈತರು ಸೂಕ್ತ ದಾಖಲಾತಿಗಳೊಂದಿಗೆ ಆ.15ರೊಳಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಕೃಷಿ ವಿಜ್ಞಾನ ಕೇಂದ್ರದಿಂದ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರು ಕೃಷಿ ವಿಜ್ಞಾನ ಕೇಂದ್ರ, ಮೀನುಗಾರಿಕಾ ಕಾಲೇಜು ಆವರಣ, ಎಕ್ಕೂರು, ಮಂಗಳೂರು ದೂರವಾಣಿ ಸಂಖ್ಯೆ: 0824-2431872 ಕರೆ ಮಾಡುವಂತೆ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ನೆಹರುನಗರದಲ್ಲಿ ಆಟವಾಡುತ್ತಿದ್ದ ಬಾಲಕ ನಾಪತ್ತೆ

error: Content is protected !!
Scroll to Top