ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ –  ಆ.08 ರಂದು ದಲಿತ್ ಸಂಘಟನೆಯಿಂದ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ವಿಟ್ಲ, ಆ.05. ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ನೇತೃತ್ವದಲ್ಲಿ ವಿವಿಧ ರಾಜಕೀಯ ಪಕ್ಷದ ಎಸ್ ಸಿ, ಎಸ್ ಟಿ ಘಟಕ ಮತ್ತು ಕಾರ್ಮಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ವಿಟ್ಲದಲ್ಲಿ ಆ.08 ರಂದು ಪ್ರತಿಭಟನೆ ನಡೆಯಲಿದೆ ಎಂದು ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ತಿಳಿಸಿದರು.

ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ವಿಟ್ಲ ಜೈನ ಬಸದಿಯಿಂದ ಮೆರವಣಿಗೆ ಹೊರಟು ವಿಟ್ಲ ನಾಡಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ. ಬಳಿಕ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿ, ಗೃಹಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದ.ಕ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷೆ ಬಿ.ಕೆ ಪ್ರೇಮ, ಕಾರ್ಯಾಧ್ಯಕ್ಷ ಚಂದ್ರಶೇಖರ ಯು, ಜಿಲ್ಲಾ ಕೋಶಾಧಿಕಾರಿ ಶಾಲಿನಿ, ತಾಲೂಕು ಮಾಜಿ ಅಧ್ಯಕ್ಷ ಗಣೇಶ್ ಸೀಗೆಬಲ್ಲೆ, ಗೀತಾ, ಸಂಜೀವ ಕುಲಾಲು ಉಪಸ್ಥಿತರಿದ್ದರು ಎನ್ನಲಾಗಿದೆ.

Also Read  ಲಾರಿ, ಹಿಟಾಚಿ ಹಾಗೂ ಜೆಸಿಬಿಗಳ ಬ್ಯಾಟರಿ ಕಳ್ಳತನ ಪ್ರಕರಣ ➤ ಕಡಬದ ವ್ಯಕ್ತಿ ಸೇರಿದಂತೆ ಇಬ್ಬರ ಬಂಧನ

error: Content is protected !!
Scroll to Top