ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ

(ನ್ಯೂಸ್ ಕಡಬ)newskadaba.com ಮೈಸೂರು, ಆ.05. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರಿಗೆ ಆಗಮಿಸಲಿದ್ದು, ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.


ವಿಮಾನ ನಿಲ್ದಾಣಕ್ಕೆ ಆಗಮಿನಿ ಬಳಿಕ ಹೆಲಿಕಾಪ್ಟರ್​ನಲ್ಲಿ ತಮಿಳುನಾಡಿಗೆ ತೆರಳಲಿದ್ದು, ಮಧುಮಲೈ ಹುಲಿ ಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ, ಮಾವುತರ ಜೊತೆ ರಾಷ್ಟಪತಿ ದ್ರೌಪದಿ ಮುರ್ಮು ಸಂವಾದ ನಡೆಸಲಿದ್ದಾರೆ. ಮೈಸೂರಿಗೆ ಆಗಮಿಸಿ ಚೆನ್ನೈಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮೈಸೂರು ಜಿಲ್ಲಾಡಳಿತ ರಾಷ್ಟ್ರಪತಿ ಮುರ್ಮು ಅವರ ಸ್ವಾಗತ ಕೋರಲು ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

Also Read  ಗೃಹಲಕ್ಷ್ಮೀ ಯೋಜನೆಗೆ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ- ಪ್ರತೀ ಗ್ರಾಮಕ್ಕೆ ಪ್ರಜಾಪ್ರತಿನಿಧಿಗಳ ನೇಮಕ

 

error: Content is protected !!
Scroll to Top