ಬಿಲ್ ಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು – ಬೆಸ್ಕಾಂ ಮಹತ್ವದ ಮಾಹಿತಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಗ್ರಾಹಕರು ವಿದ್ಯುತ್ ಬಿಲ್‌ನ ಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ತಿಳಿಸಿದೆ.


ಸೆಪ್ಟೆಂಬರ್ 30ರೊಳಗೆ ವಿದ್ಯುತ್ ಬಾಕಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 25ರೊಳಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಆಗಸ್ಟ್ ಬಿಲ್ನಲ್ಲಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದೆ. ಜುಲೈ 25ರಿಂದ ಆಗಸ್ಟ್ 25ರೊಳಗೆ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಸೆಪ್ಟೆಂಬರ್ ಬಿಲ್ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ. ಯೋಜನೆಗೆ ಅರ್ಹರಾಗಲು ಸರಾಸರಿ 200 ಯೂನಿಟ್ ಮೀರಬಾರದು ಎಂದು ತಿಳಿಸಿದೆ.
ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25 ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ, ಯೋಜನೆಯ ಪ್ರಯೋಜನವನ್ನು ಅವರು, ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ. ಯೋಜನೆಯ ನೋಂದಣಿಗೆ ವಿಳಂಬ ಬೇಡ. ಇಂದೇ ನೋಂದಾಯಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದೆ ಎಂದು ವರದಿಯಾಗಿದೆ.

Scroll to Top