ಆಲಂಕಾರು: ಟೂರಿಸ್ಟ್ ಕಾರು ಢಿಕ್ಕಿ ► ಶಾಲಾ ವಿದ್ಯಾರ್ಥಿನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಟೊಯೋಟಾ ಇಟಿಯೋಸ್ ಕಾರೊಂದು ಢಿಕ್ಕಿಯಾದ ಪರಿಣಾಮ ಶಾಲಾ ಬಾಲಕಿಯೋರ್ವಳು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರಿನಲ್ಲಿ ಶನಿವಾರದಂದು ನಡೆದಿದೆ.

ಗಾಯಾಳುವನ್ನು ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಧನ್ಯಶ್ರೀ ಎಂದು ಗುರುತಿಸಲಾಗಿದೆ. ಈಕೆ ಶನಿವಾರ ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಮಂಗಳೂರಿನಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿಯಾಗಿ ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ವಯೋಶ್ರೇಷ್ಠ ಸಮ್ಮಾನ್ 2019 ಪ್ರಶಸ್ತಿ ➤ ಅರ್ಜಿ ಆಹ್ವಾನ

error: Content is protected !!
Scroll to Top