ಮರದಿಂದ ಬಿದ್ದು ಪೊಲೀಸ್ ಪೇದೆ ಮೃತ್ಯು

(ನ್ಯೂಸ್ ಕಡಬ) newskadaba.com ಕೊಡಗು, ಆ. 07. ಮರದಿಂದ ಬಿದ್ದು ಪೊಲೀಸ್​ ಸಿಬ್ಬಂದಿಯೋರ್ವರು ಮೃತಪಟ್ಟ ಘಟನೆ ಕುಶಾಲನಗರ ತಾಲೂಕಿನ ಕಾನ್​ ಬೈಲ್​ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮೃತ ಸಿಬ್ಬಂದಿಯನ್ನು ಲೋಕೇಶ್ (40)  ಎಂದು ಗುರುತಿಸಲಾಗಿದೆ. ಲೋಕೇಶ್​ ಅವರು ಮಾವಿನ ಮರ ಕಸಿ ಮಾಡಲು ಮರ ಏರಿದ್ದ ಸಮಯದಲ್ಲಿ ಬಿಪಿ ಕಡಿಮೆಯಾಗಿ, ತಲೆ ತಿರುಗಿ ಮರದಿಂದ ಕಾಂಕ್ರೀಟ್ ರೋಡ್​ಗೆ ಬಿದ್ದ ಪರಿಣಾಮ​ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲೋಕೇಶ್​ ಅವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರಿಗೆ 10 ವಷ೯ಗಳಿಂದ ಗನ್ ಮ್ಯಾನ್ ಆಗಿ ಕೆಲಸ ಮಾಡಿದ್ದರು ಎನ್ನಲಾಗಿದೆ.

Also Read  ಸುಳ್ಯ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ ಅಪಾಯದಿಂದ ಪಾರು

 

error: Content is protected !!
Scroll to Top