ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಮಂಗಳೂರು, . 07. ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕರವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲತಃ ತುಮಕೂರಿನ ಗುಬ್ಬಿಯವರಾದ ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣ ಪತಿಯೊಂದಿಗೆ ಸೇರಿ ಮರಗಳನ್ನು ನೆಟ್ಟು ಬೆಳೆಸಿದ್ದು, ದಂಪತಿಗಳು ಮೊದಲ ವರ್ಷದಲ್ಲಿ 4 ಕಿ.ಮೀ ರಸ್ತೆಯ ಎರಡು ಬದಿಗಳಲ್ಲಿ 10 ಆಲದ ಸಸಿಗಳನ್ನು ನೆಟ್ಟು ಬೆಳೆಸಲು ಆರಂಭಿಸಿದ್ದರು. ಇಲ್ಲಿಯವರೆಗೂ ತಿಮ್ಮಕ್ಕರವರು 8 ಸಾವಿರಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.

Also Read  ಅನ್ಯಕೊಮಿನ ಯುವಕರು ಹಿಂದೂ ಯುವಕನ ಮೇಲೆ ಹಲ್ಲೆ.!

error: Content is protected !!
Scroll to Top