ಮಕ್ಕಳ ಮೇಲೆ ವಕ್ರದೃಷ್ಟಿ – ತಳ್ಳುಗಾಡಿ ವ್ಯಾಪಾರಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, . 07. ಫೋನ್‌-ಇನ್‌ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕೇಳಿಬಂದ ದೂರಿನ ಪ್ರಕಾರ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಡಿ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.

ಬಂಧಿತ ಆರೋಪಿಗಳನ್ನು ಅಮರ್‌ ಮತ್ತು ಸೂರಜ್‌ ಎಂದು ಗುರುತಿಸಲಾಗಿದೆ. ಇವರು ನಡೆದುಕೊಂಡು ಹೋಗುವ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದುದಲ್ಲದೇ ಮಕ್ಕಳು ಹೋಗುವಾಗ ಅವರನ್ನು ಹಿಂಬಾಲಿಸಿ, ಕೆಟ್ಟ ದೃಷ್ಠಿಯಿಂದ ನೋಡುವ ಆರೋಪ ಕೇಳಿಬಂದಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್‌ ಕುಲದೀಪ್‌ ಕುಮಾರ್‌ ಜೈನ್‌ ಅವರು, ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದಿಬಂದಿದೆ.

Also Read  ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ➤ ನಾಲ್ವರಿಗೆ ಗಂಭೀರ ಗಾಯ

error: Content is protected !!
Scroll to Top