ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..!



(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಓರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಲ್ಡರ್ ಮೋಹನ್ ಅಮೀನ್ (66) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.








17 ಮಹಡಿಯಲ್ಲಿ ವಾಸವಿದ್ದ ಅವರು ಅಪಾರ್ಟ್‌ಮೆಂಟ್ ನ ಟೆರೆಸ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೋಹನ್ ಅಮೀನ್ ಅವರ ಆತ್ಮಹತ್ಯೆ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.






error: Content is protected !!
Scroll to Top