(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಆ. 07. ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ 16 ತಿಂಗಳಲ್ಲಿ 60ಕ್ಕೂ ಹೆಚ್ಚು ಗರ್ಭಿಣಿಯರಿಗೆ ಎಚ್‌ಐವಿ ಪಾಸಿಟಿವ್ ಕಂಡುಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಮೀರತ್ ನ ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನ ಎ.ಆರ್.ಟಿ. ಕೇಂದ್ರದ ವರದಿಯ ನಂತರ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಬೆಳಕಿಗೆ ಬಂದಿವೆ. ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನಲ್ಲಿ ಮಕ್ಕಳ ಹೆರಿಗೆಗಾಗಿ ಬಂದ 81 ಗರ್ಭಿಣಿ ಮಹಿಳೆಯರಲ್ಲಿ ಎಚ್‌ಐವಿ ದೃಢಪಟ್ಟಿದ್ದು, 81 ಎಚ್‌ಐವಿ ಪಾಸಿಟಿವ್ ಮಹಿಳೆಯರಲ್ಲಿ ಕನಿಷ್ಠ 35 ಪೀಡಿತ ಮಹಿಳೆಯರು ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ.