ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಕಮೆಂಟ್‌ – ವಾಟ್ಸಾಪ್‌ ಅಡ್ಮಿನ್‌ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 07.  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಟ್ಸಾಪ್ ಗ್ರೂಪ್‌ ಒಂದರಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಕಾರಣಕ್ಕೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬಂಧಿತ ವ್ಯಕ್ತಿಯನ್ನು ಸಹಾಬುದ್ದೀನ್ ಅನ್ಸಾರಿ ಎಂದು ಗುರುತಿಸಲಾಗಿದೆ. ಆಗಸ್ಟ್ 04 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧವಾದ ಕಮೆಂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಕಮೆಂಟ್ ಪೋಸ್ಟ್ ಮಾಡಿದ ವ್ಯಕ್ತಿ ಮುಸ್ಲಿಂ ಅನ್ಸಾರಿ ತಲೆಮರೆಸಿಕೊಂಡಿದ್ದಾನೆ ಎಂದು ಅವರು ಹೇಳಿದ್ದು, ಈ ಸಂಬಂಧ ಆಗಸ್ಟ್ 4 ರಂದು ಟ್ವಿಟರ್ ಮೂಲಕ ದೂರುಸ್ವೀಕರಿಸಲಾಗಿದೆ ಎಂದು ಕೋಟ್ವಾಲಿ ಪೊಲೀಸ್ ಠಾಣಾಧಿಕಾರಿ ಅಜಯ್ ಕುಮಾರ್ ಸೇಠ್ ಹೇಳಿದ್ದಾರೆ.

Also Read  ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯ ವ್ಯಸನಿ ಪತಿ.!!

ಅವಹೇಳನಕಾರಿ ಕಮೆಂಟ್‌ ನ ಸ್ಕ್ರೀನ್‌ ಶಾಟ್ ಪಡೆಯಲಾಗಿದೆ. ದೂರಿನ ಆಧಾರದ ಮೇಲೆ ಇಬ್ಬರ ವಿರುದ್ಧ ಐಪಿಸಿ, ಐಟಿ ಕಾಯ್ದೆ ಮತ್ತು ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

error: Content is protected !!
Scroll to Top