(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07. ರಾಜ್ಯದ ಹಲವೆಡೆ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ ಶಂಕಿತ ಆರು ಮಂದಿ ಉಗ್ರರರನ್ನು ಹೆಚ್ಚಿನ ವಿಚಾರಣೆಗಾಗಿ ಎನ್‌ಐಎ ಸದ್ಯದಲ್ಲೇ ವಶಕ್ಕೆ ಪಡೆಯುವ ಸಾಧ್ಯತೆಯಿದೆ.
ಸಿಸಿಬಿ ಪೊಲೀಸರ ತನಿಖೆ ಪೂರ್ಣಗೊಂಡು ಆರೋಪಿಗಳನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೀಗಾಗಿ, ಕೇಂದ್ರ ಗೃಹ ಸಚಿವಾಲಯ ಅಥವಾ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಎನ್‌ಐಎ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆಯಲಿದ್ದಾರೆ. ವಿದೇಶದಿಂದ ಆರ್ಥಿಕ ನೆರವು ಮತ್ತು ವಿಧ್ವಂಸಕ ಕೃತ್ಯಕ್ಕೆ ಗ್ರೆನೇಡ್ ಪೂರೈಕೆ ಮಾಡಿರುವುದನ್ನು ಎನ್‌ಐಎ ಗಂಭೀರವಾಗಿ ಪರಿಗಣಿಸಿದ್ದು, ಎನ್ಐಎ ಐವರನ್ನು ವಶಕ್ಕೆ ಪಡೆಯಲಿದ್ದಾರೆ ಎಂದು ವರದಿಯಾಗಿದೆ.
