ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಮಂಗಳೂರು ರೈಲ್ವೆ ನಿಲ್ದಾಣದ ಆಧುನೀಕರಣದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಯಿತು. ನವದೆಹಲಿ ವಿಡಿಯೋ ಕಾನ್ಫೆರೆನ್ಸ್(ವರ್ಚುವಲ್) ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದರು ಎನ್ನಲಾಗಿದೆ.


ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಆವರಣದಲ್ಲಿ ನಡೆದ ಸಮಾರಂಭವನ್ನು ಸಂಸದ ನಳಿನ್ ಕುಮಾರ್ ಕಟೀಲು ಜ್ಯೋತಿ ಬೆಳಗಿಸಿ ಉದ್ಘಾಟಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ರೂ.19.32 ಕೋಟಿ ವೆಚ್ಚದಲ್ಲಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ರಾಷ್ಟ್ರೀಯ ದರ್ಜೆಯ ಉನ್ನತ ಮಟ್ಟದ ರೈಲು ನಿಲ್ದಾಣವಾಗಿ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

Also Read  ಹಿರಿಯ ಕಾಂಗ್ರೇಸ್ ನಾಯಕ ಅಹ್ಮದ್ ಪಟೇಲ್ ನಿಧನ


ಈ ವೇಳೆ ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ ಭರತ್ ಶೆಟ್ಟಿ , ಶಾಸಕಿ ಭಾಗೀರಥಿ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್ ಸಿಂಹ ನಾಯಕ್ , ಮಂಗಳೂರು ಮನಪಾ ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಸ್ಥಳೀಯ ಕಾರ್ಪೊರೇಟರ್ ಶೋಭಾ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು ಎನ್ನಲಾಗಿದೆ.

error: Content is protected !!
Scroll to Top