ಚಿನ್ನಾರಿ ಮುತ್ತ ಪತ್ನಿ ಸ್ಪಂದನಾ ಸಾವಿಗೆ ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸಂತಾಪ

(ನ್ಯೂಸ್ ಕಡಬ) newskadaba.com ಬೆಂಗಳೂರು, . 07. ಕನ್ನಡದ ಖ್ಯಾತ ನಟ ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ.

ಟ್ವೀಟ್‌ ಮೂಲಕ ಸಂತಾಪ ವ್ಯಕ್ತಪಡಿಸಿರುವ ಸಿಎಂ, ‘ಸ್ಪಂದನಾ ಅವರ ಅಕಾಲಿಕ ನಿಧನದ ವಾರ್ತೆ ತೀವ್ರ ಆಘಾತವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ. ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಕಂಬನಿ ಮಿಡಿದಿದ್ದಾರೆ.

ಸ್ಪಂದನಾ ರಾಘವೇಂದ್ರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಶೋಕ ವ್ಯಕ್ತಪಡಿಸಿದ್ದಾರೆ. ಸ್ಪಂದನಾ ಅವರು ಬ್ಯಾಂಕಾಕ್‌ ನಲ್ಲಿ ಹೃದಯಾಘಾತ ಉಂಟಾಗಿ ದಿಢೀರ್ ಮೃತಪಟ್ಟಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಸಾಂತ್ವನ ಹೇಳಿದ್ದಾರೆ.

Also Read  ಉಪಚುನಾವಣೆ ಕಾಂಗ್ರೆಸ್ ಸಮರ್ಥವಾಗಿ ಎದುರಿಸಲಿದೆ - ಸಿಎಂ

error: Content is protected !!
Scroll to Top