(ನ್ಯೂಸ್ ಕಡಬ)newskadaba.com ಪಾಟ್ನಾ, ಆ.07. 26 ಪಕ್ಷಗಳ ಪ್ರತಿಪಕ್ಷ ‘ಇಂಡಿಯಾ’ ಮೈತ್ರಿಕೂಟದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಚಾಲಕರಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಮೈತ್ರಿಕೂಟದ ಮುಂದಿನ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿದೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಮೈತ್ರಿಕೂಟದ 11 ಸದಸ್ಯರ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರಲಿದ್ದು, ನಿತೀಶ್ ಕುಮಾರ್ ಅವರನ್ನು ಸಂಚಾಲಕರಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಾರಥ್ಯದ ಎನ್‌ಡಿಎ ವಿರುದ್ಧ ರಣತಂತ್ರ ರೂಪಿಸುತ್ತಿರುವ ಇಂಡಿಯಾ ಮೈತ್ರಿ ಕೂಟ, ತನ್ನ ಒಕ್ಕೂಟವನ್ನು ಇನ್ನಷ್ಟು ಬಲ ಪಡಿಸಲು ಹಾಗೂ ಇನ್ನಷ್ಟು ತೀಕ್ಷ್ಣವಾಗಿ ಸರ್ಕಾರದ ವಿರುದ್ಧ ಹೋರಾಡಲು ತಂತ್ರಗಾರಿಕೆ ರೂಪಿಸಲು ನಿರ್ಧರಿಸಿದೆ.