ಬಸ್‌ ಗಾಗಿ ಕಾದು ನಿಂತಿದ್ದವರಿಗೆ ಕಾರು ಢಿಕ್ಕಿ –  ಇಬ್ಬರು‌ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಹಾವೇರಿ, ಆ.07. ವೇಗವಾಗಿ ಚಲಿಸುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.

ನೀರಲಗಿ ಗ್ರಾಮದ ವಿರೂಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಶೇರವಾಡ (55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹೊನ್ನಾಪುರ ಗ್ರಾಮದ ಬಸನಗೌಡ ಶಿವನಗೌಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿಗ್ಗಾವಿ ಪಟ್ಟಣಕ್ಕೆ ತೆರಳಲು ನೀರಲಗಿ ಬಳಿ ಹೆದ್ದಾರಿ ಬದಿ ನಿಂತಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಚಿದಾನಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು  ಸರಿಯಾದ ಸಮಯಕ್ಕೆ ಆಂಬುಲೆನ್ಸ್  ಬಾರದ ಕಾರಣ ಚಿದಾನಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಆರೋಪಿಯನ್ನೇ ಅಪಹರಿಸಿ ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು..!

 

error: Content is protected !!
Scroll to Top