ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.07. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ.


ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ . ಈ ಬಗ್ಗೆ ಬಾಲಕಿಯ ತಂದೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗಿತ್ತು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಶಿವಮೊಗ್ಗ ಉಪ ವಿಭಾಗ-ಎ ಡಿವೈಎಸ್ಪಿ ಬಾಲರಾಜ್ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು.

Also Read  ಬಂಟ್ವಾಳ: ಮೂವರನ್ನು ಬಂಧಿಸಿ ಪಟ್ನಾಕ್ಕೆ ಕರೆದೊಯ್ದ NIA ತಂಡ

error: Content is protected !!
Scroll to Top