ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ – ರೋಗಿಗಳ ಸ್ಥಳಾಂತರ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.07. ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಾರ್ಡ್‌ನಿಂದ ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ ಎಂದು ವರದಿ ತಿಳಿದುಬಂದಿದೆ. ಮಧ್ಯಾಹ್ನ 11.45ಕ್ಕೆ ಈ ಘಟನೆ ಸಂಭವಿಸಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಆರು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ.


ಎಂಡೋಸ್ಕೋಪಿ ನಡೆಸುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಸ್ಥಳ ಕಟ್ಟಡದ ಎರಡನೇ ಮಹಡಿಯಲ್ಲಿ ಎಮರ್ಜೆನ್ಸಿ ವಾರ್ಡ್ ಸಮೀಪದಲ್ಲೇ ಇತ್ತು. ಹೀಗಾಗಿ ಭಾರಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಕೂಡಲೇ ಅಲ್ಲಿದ್ದ ರೋಗಿಗಳನ್ನು ಬೇರೆಡೆ ಸ್ಥಳಾಂತರಿಸಲಾಯಿತು. ಯಾವ ಕಾರಣದಿಂದ ಬೆಂಕಿ ಸಂಭವಿಸಿದೆ ಎಂಬ ಬಗ್ಗೆ ತಿಳಿದು ಬಂದಿಲ್ಲ. ಆದರೆ ಕಟ್ಟಡದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

error: Content is protected !!
Scroll to Top