(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಡೆಂಗ್ಯು ತಡೆಗಟ್ಟಲು ಅದರ ಬಗ್ಗೆ ವ್ಯಾಪಕ ವಾದ ಮಾಹಿತಿ ನೀಡುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ತಿಳಿಸಿದರು ಎಂದು ವರದಿ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ರು ಕುಟುಂಬದ ಕಲ್ಯಾಣ ಇಲಾಖೆ ವತಿಯಿಂದ ಪತ್ರಿಕಾ ಭವನದ ಮುಂಭಾಗದಲ್ಲಿ ಡೆಂಗ್ಯು ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆ ಯಾದ್ಯಂತ ಸಂಚರಿಸಲು ನಿರ್ಮಿಸಲಾದ ಡೆಂಗ್ಯು ಜಾಗೃತಿ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.
ಡೆಂಗ್ಯು ಕೇವಲ ಜ್ವರ ಅಲ್ಲ, ಅದು ಸೋಂಕು ಹೊಂದಿದ ಸೊಳ್ಳೆಯ ಮೂಲಕ ಹರಡುವ ವೈರಸ್ ಜ್ವರ, ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕೈ ಗೊಳ್ಳುವ ಬಗ್ಗೆ ಮಾಹಿತಿ ಅಗತ್ಯವಿದೆ ಎಂದರು.