ಟೈರ್ ಸ್ಫೋಟಗೊಂಡು ಕಾರು ಪಲ್ಟಿ- ಕಾನ್ಸ್ಟೇಬಲ್ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 07. ಟೈರ್ ಸ್ಫೋಟಗೊಂಡ ಪರಿಣಾಮ ಕಾರೊಂದು ಪಲ್ಟಿಯಾಗಿ ಹೆಡ್‌ ಕಾನ್‌ಸ್ಟೇಬಲ್‌ ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೆಟ್ರೋಲ್ ಬಂಕ್ ಬಳಿ ಸೋಮವಾರದಂದು ವರದಿಯಾಗಿದೆ.

ಮೃತರನ್ನು ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೇಬಲ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಮೋಮಿನಪುರದ ಮುಈಝುದ್ದೀನ್ (52) ಎಂದು ಗುರುತಿಸಲಾಗಿದೆ. ಘಟನೆಯಿಂದ ಅವರ ಸಹೋದರ ನಜುಮುದ್ದಿನ್ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇವರು ಕಲಬುರಗಿಯಿಂನದ ಕಾರಿನಲ್ಲಿ ಸೇಡಂಗೆ ಹೋಗುತ್ತಿದ್ದಾಗ ಮಳಖೇಡ ಹತ್ತಿರ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ವಿಟ್ಲ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಮರಳು ಕೊರೆಯುವ ಯಂತ್ರ ಬೋಟು ವಶಕ್ಕೆ.

error: Content is protected !!
Scroll to Top