ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ – ಅತ್ಯಾಚಾರ ಶಂಕೆ..!

(ನ್ಯೂಸ್ ಕಡಬ)newskadaba.com ಅಸ್ಸಾಂ, ಆ. 07. ಯುವತಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಅತ್ಯಾಚಾರದಿಂದ ಮನನೊಂದು ಯುವತಿಯರು ಸಾವಿಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

19 ವರ್ಷ ಹಾಗೂ 17 ವರ್ಷದ ಯುವತಿಯರ ಮೃತದೇಹಗಳು ಏಕಕಾಲಕ್ಕೆ ಪತ್ತೆಯಾಗಿದ್ದು, ಪ್ರತ್ಯೇಕ ಸ್ಥಳದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಂತಿದ್ದ ಶವಗಳನ್ನು ಸ್ಥಳೀಯರು ಗಮನಿಸಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವತಿಯರು ಅತ್ಯಾಚಾರಕ್ಕೊಳಗಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಸಾವಿನ ಹಿಂದಿನ ಕಾರಣ ಪತ್ತೆ ಹಚ್ಚಲು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಪೊಲೀಸ್​ ತಂಡ ಘಟನೆಯನ್ನು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ” ಎಂದರು.

Also Read  ಸುಳ್ಯ: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ

error: Content is protected !!
Scroll to Top