ಕೇರಳದಿಂದ ಜಾನುವಾರು ಸಾಗಾಟ ನಿಷೇಧಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 08. ಕಾಲುಬಾಯಿ ಜ್ವರ ಜಿಲ್ಲೆಗೆ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಅಗತ್ಯವಿರುವುದರಿಂದ ಕೇರಳದಲ್ಲಿ ರೋಗೋದ್ರೇಕ ಹತೋಟಿಗೆ ಬರುವವರೆಗೆ ಕೇರಳ ರಾಜ್ಯದಿಂದ ಜಿಲ್ಲೆಗೆ ಬರುವ ಹಾಗೂ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಜಾನುವಾರುಗಳನ್ನು ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.

 

ಕೇರಳ ರಾಜ್ಯದಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗೋದ್ರೇಕವು ಕಂಡುಬಂದಿದ್ದು, ಅದು ವೈರಸ್‍ನಿಂದ ಬಹುಬೇಗ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತದೆ. ಈ ರೋಗ ಜಾನುವಾರುಗಳಿಗೆ ಮರಣಾಂತಿಕವಾಗಿರುವುದರಿಂದ ಕೇರಳ ರಾಜ್ಯಕ್ಕೆ ಜಾನುವಾರು ಸಾಗಾಟ ಮಾಡುವುದನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕೆರೆಗೆ ವಿಷ ಬೆರೆಸಿದ ಶಂಕೆ  ➤ ನೂರಾರು ಮೀನು ಮತ್ತು ಜಾನುವಾರುಗಳ ಸಾವು  

error: Content is protected !!
Scroll to Top