ಸುಳ್ಯ: ಕಾರು ಢಿಕ್ಕಿ- ಪಾದಚಾರಿ ಮೃತ್ಯು



(ನ್ಯೂಸ್ ಕಡಬ) newskadaba.com ಸುಳ್ಯ, ಆ. 08. ಪಾದಚಾರಿಗೆ ಓಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.







ಮೃತಪಟ್ಟ ವ್ಯಕ್ತಿಯನ್ನು ಉಳುವಾರು ನಿವಾಸಿ ತೀರ್ಥರಾಮ ಎಂದು ಗುರುತಿಸಲಾಗಿದೆ. ತೀರ್ಥರಾಮ ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓಮ್ನಿ ಕಾರು ಢಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಿಸದೇ ಮೃತಪಟಿರುತ್ತಾರೆ ಎನ್ನಲಾಗಿದೆ. ಈ ಕುರಿತು ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.






error: Content is protected !!
Scroll to Top