(ನ್ಯೂಸ್ ಕಡಬ) newskadaba.com ವಿಟ್ಲ, ಆ. 08. ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಪೆರುವಾಯಿ ಗ್ರಾಮದ ಕಿನಿಯರಪಾಲು ನಿವಾಸಿ ಸುಧೀರ್ ಕುಮಾರ್ (34) ಎಂದು ಗುರುತಿಸಲಾಗಿದೆ. ಈತನ ವಿರುದ್ದ ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಹೊರಡಿಸಲಾಗಿತ್ತು. ಆದರೆ ಆತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.