ಚಾಕೊಲೇಟ್‌ನಲ್ಲಿ ಗಾಂಜಾ ಪತ್ತೆ – ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, . 08. ಎರಡು ಅಂಗಡಿಗಳಿಂದ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಬಾಂಗ್‌ ಚಾಕೊಲೇಟ್‌ಗಳಲ್ಲಿ ಗಾಂಜಾ ಅಂಶ ಇರುವುದು ದೃಢಪಟ್ಟಿದ್ದು, ಅದನ್ನು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಾದ ಮನೋಹರ ಶೇಟ್ ಹಾಗೂ ಬೆಚನ್‌ ಸೋನ ಎಂಬವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಜು. 19ರಂದು ಕಾಋಯಾಚರಣೆ ನಡೆಸಿದ್ದ ಮಂಗಳೂರು ನಗರದ ಉತ್ತರ ಠಾಣೆಯ ಪೊಲೀಸರು, ನಗರದ ಕಾರ್‌ಸ್ಟ್ರೀಟ್‌ನಲ್ಲಿ ಅಂಗಡಿ ನಡೆಸುತ್ತಿದ್ದ ಮನೋಹರ್‌ ಶೇಟ್‌ ಮಾರಾಟ ಮಾಡುತ್ತಿದ್ದ 48,000 ರೂ. ಮೌಲ್ಯದ ತಲಾ 40 ಬಾಂಗ್‌ ಚಾಕೊಲೆಟ್‌ ತುಂಬಿರುವ 300 ಸ್ಯಾಚೆಟ್‌ ಗಳನ್ನು ಮತ್ತು 592 ಬಿಡಿ ಚಾಕಲೆಟ್‌ಗಳು ಸೇರಿದಂತೆ ಒಟ್ಟು 12,592 ಬಾಂಗ್‌ ಚಾಕಲೆಟ್‌ಗಳನ್ನು ಸ್ವಾಧೀನಪಡಿಸಿಕೊಂಡಿದ್ದರು. ಇನ್ನು ಅದೇ ದಿನ ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾಧಿಕಾರಿ ಹಾಗೂ ಸಿಬಂದಿಗಳು ಕಾರ್ಯಾಚರಣೆ ನಡೆಸಿ ನಗರದ ಹೈಲ್ಯಾಂಡ್‌ ಬಳಿ ಗೂಡಂಗಡಿಯಲ್ಲಿ ಬಾಂಗ್‌ ಮಿಶ್ರಿತ ಚಾಕೊಲೆಟನ್ನು ಮಾರಾಟ ಮಾಡುತ್ತಿದ್ದ ಆರೋಪಿ ಬೆಚನ್‌ ಎಂಬಾತನ ವಶದಿಂದ 5,500 ರೂ. ಮೌಲ್ಯದ ಬಾಂಗ್‌ ಚಾಕೊಲೆಟ್‌ಗಳನ್ನು ಸ್ವಾಧೀನಪಡಿಸಿಕೊಂಡಿದ್ದರು.

Also Read  ಪಂಜ: ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಸದಸ್ಯರ ನೇಮಕ

ಬಳಿಕ ಆ ಚಾಕೊಲೆಟ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಅದರಲ್ಲಿ ಗಾಂಜಾ ಅಂಶವಿರುವುದಾಗಿ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಬಂದಿರುವುದರಿಂದ ಆರೋಪಿತರ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇನ್ನು ಆರೋಪಿಗಳನ್ನು ನ್ಯಾಯಾಲಯಲಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

error: Content is protected !!
Scroll to Top