ನಿಲ್ಲಿಸಿದ್ದ ಲಾರಿಗಳ ಬ್ಯಾಟರಿ ಕಳವು – ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು. 08. ರಸ್ತೆ ಬದಿ ನಿಲುಗಡೆಗೊಳಿಸಿದ್ದ ಲಾರಿ ಸೇರಿದಂತೆ ಹಲವು ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುತ್ತಿದ್ದ ಇಬ್ಬರನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನಾಯಮ್ಮರ ಮೂಲೆಯ ಎನ್. ಎ. ಮಿರ್ಷಾದ್ ಅಲಿ ಮತ್ತು ಮುಹಮ್ಮದ್ ಜಶೀರ್ ಟಿ. ಎ. ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ವಿದ್ಯಾನಗರ ಪರಿಸರದಲ್ಲಿ ನಿಲ್ಲಿಸಲಾಗಿದ್ದ ಲಾರಿಗಳಿಂದ ಬ್ಯಾಟರಿ ಕಳವುಗೈದ ಬಗ್ಗೆ ಪೊಲೀಸರಿಗೆ ಬಂದ ದೂರಿನಂತೆ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಂಡದಲ್ಲಿ ಇನ್ನಷ್ಟು ಮಂದಿ ಇರುವುದಾಗಿಯೂ ಪೊಲೀಸರು ತಿಳಿಸಿದ್ದಾರೆ.

Also Read  ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ 'ಅಮೃತಮತಿ' ಆಯ್ಕೆ

error: Content is protected !!
Scroll to Top