ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣ – ಉಡುಪಿಗೆ ಸಿಐಡಿ ತಂಡ ಭೇಟಿ

(ನ್ಯೂಸ್ ಕಡಬ) newskadaba.com ಉಡುಪಿ, ಆ. 08. ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಪೊಲೀಸರು ಮಂಗಳವಾರದಂದು ಉಡುಪಿಗೆ ಆಗಮಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಉಡುಪಿಗೆ ಧಾವಿಸಿರುವ ಸಿಐಡಿ ವಿಭಾಗದ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ, ಎಸ್ಪಿ ಕಚೇರಿಗೆ ಭೇಟಿ ನೀಡಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ಹಾಗೂ ಪ್ರಕರಣದ ಈ ಹಿಂದಿನ ತನಿಖಾಧಿಕಾರಿ ಬೆಳ್ಳಿಯಪ್ಪ ಅವರೊಂದಿಗೆ ಮಾತುಕತೆ ನಡೆಸಿದೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಿಐಡಿ ತಂಡ ಪಡೆದುಕೊಳ್ಳಲಿದೆ.

Also Read  ನೂತನ ಸಚಿವರಿಗೆ ಖಾತೆ ಹಂಚಿಕೆ ➤ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿ ಎಸ್.ಅಂಗಾರ


ಈ ಸಂಬಂಧ ಕಾಲೇಜಿಗೆ ಭೇಟಿ ನೀಡಲಿರುವ ತಂಡ, ಸಂತ್ರಸ್ತೆ ಹಾಗೂ ಆರೋಪಿ ವಿದ್ಯಾರ್ಥಿನಿಯರನ್ನು ಮತ್ತು ಆಡಳಿತ ಮಂಡಳಿಯನ್ನು ವಿಚಾರಣೆಗೆ ಒಳಪಡಿಸಲಿದೆ. ಅಲ್ಲದೇ ಸಿಐಡಿ ವಿಭಾಗದ ಪೊಲೀಸ್ ಪೊಲೀಸ್ ಅಧೀಕ್ಷಕರು ಕೂಡ ಇಂದು ಉಡುಪಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

error: Content is protected !!
Scroll to Top