ಪ್ರೇಮ ಪ್ರಕರಣದಲ್ಲಿ ನೊಂದು ಕೊಲ್ಲೂರು ಠಾಣಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ► ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಯತ್ನ

(ನ್ಯೂಸ್ ಕಡಬ) newskadaba.com ಕುಂದಾಪುರ, ಫೆ.04. ಮದುವೆ ನಿಶ್ಚಿತಾರ್ಥದಲ್ಲಿ ಮನಸ್ತಾಪಗೊಂಡು ಪೊಲೀಸ್ ಕಾನ್‌ಸ್ಟೇಬಲ್ ಓರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಬೆಳಗ್ಗೆ ಕೊಲ್ಲೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕೊಲ್ಲೂರು ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್, ದಾವಣಗೆರೆಯ ಮಲೆಬೆನ್ನೂರು ನಿವಾಸಿ ನಾಗರಾಜ(27) ಎಂದು ಗುರುತಿಸಲಾಗಿದೆ. ಇವರು ತನ್ನ ಬ್ಯಾಚಿನ ಮಹಿಳಾ ಪೇದೆಯೊಬ್ಬರನ್ನು ಪ್ರೀತಿಸುತ್ತಿದ್ದು, ಈ ಮಧ್ಯೆ ನಾಗರಾಜ್‌ಗೆ ಬೇರೆ ಹುಡುಗಿಯ ಜೊತೆ ವಿವಾಹ ನಿಶ್ಚಯವಾಗಿತ್ತೆನ್ನಲಾಗಿದೆ. ಇದೇ ವಿಚಾರದಲ್ಲಿ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿ ನಾಗರಾಜ್ ತನ್ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Also Read  ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ - ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ

ನಾಗರಾಜ್ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದ ಮಹಿಳಾ ಕಾನ್ಸ್‌ಟೇಬಲ್ ಕೂಡಾ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಪೊಲೀಸರು ಆಕೆಯನ್ನು ರಕ್ಷಿಸಿ ಕುಂದಾಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top