ಮರಣೋತ್ತರ ಪರೀಕ್ಷೆ ಮುಕ್ತಾಯ – ರಾತ್ರಿ 11 ಗಂಟೆಗೆ ಬೆಂಗಳೂರು ತಲುಪಲಿರುವ ಸ್ಪಂದನಾ ಮೃತದೇಹ..!



(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಥೈಲ್ಯಾಂಡ್ ನಲ್ಲಿ ಮರಣೋತ್ತರ ಪರೀಕ್ಷೆ ಸಂಪೂರ್ಣ ಮುಗಿದಿದೆ.







ಈ ಕುರಿತು ಮಾಹಿತಿ ನೀಡಿರುವ ಬಿ.ಕೆ. ಹರಿಪ್ರಸಾದ್, ಇಂದು ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಸಂಪೂರ್ಣವಾಗಿ ಮುಕ್ತಾಯವಾಗಿದ್ದು, ಥೈಲ್ಯಾಂಡ್ ರಾಷ್ಟ್ರದ ವಿಧಿ ವಿಧಾನದ ಮೂಲಕ ರಾತ್ರಿ 11 ಗಂಟೆಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಸ್ಪಂದನಾ ಮೃತದೇಹ ತರಲಾಗುತ್ತದೆ. ನಾಳೆ ಮಧ್ಯಾಹ್ನದವರೆಗೆ ಸ್ಪಂದನಾ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ನಾಳೆ ಸಂಜೆ ಶ್ರೀರಾಂಪುರದಲ್ಲಿ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.






error: Content is protected !!
Scroll to Top