ಒಂದೇ ದಿನ ಸೇವೆಯಿಂದ ನಿವೃತ್ತಿ ಹೊಂದಿದ ದಂಪತಿ- ಸನ್ಮಾನ

(ನ್ಯೂಸ್ ಕಡಬ) newskadaba.com ಉಡುಪಿ, ಆ. 08. ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ದಂಪತಿ ಒಂದೇ ದಿನ ಸೇವೆಯಿಂದ ನಿವೃತ್ತಿ ಹೊಂದಿದ ಅಪರೂಪದ ಘಟನೆ ನಡೆದಿದೆ.

ಕರ್ನಾಟಕ ಕರಾವಳಿ ಕಾವಲು ಪೊಲೀಸ್ ಮಲ್ಪೆ, ಉಡುಪಿಯ ಕಂಟ್ರೋಲ್ ರೂಂ ಉಪನಿರೀಕ್ಷಕ ಸೇರಿದಂತೆ ಪೊಲೀಸ್ ಇಲಾಖೆಯಲ್ಲಿ 31 ವರ್ಷ ಆರು ತಿಂಗಳ ಕಾಲ ಸೇವೆ ಸಲ್ಲಿಸಿದ್ದ ಬಿ.ಮನಮೋಹನ ರಾವ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ವಲಯ, ಕಾರ್ಕಳದಲ್ಲಿ ಪತ್ರಾಂಕಿತ ವ್ಯವಸ್ಥಾಪಕರಾಗಿ ಸುಮಾರು 33 ವರ್ಷ 6 ತಿಂಗಳು ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶೋಭಾ ಎನ್. ಅವರನ್ನು ಕರಾವಳಿ ಕಾವಲು ಪೊಲೀಸ್ ಘಟಕದ ವತಿಯಿಂದ ಸನ್ಮಾನಿಸಲಾಯಿತು. ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ದಂಪತಿಯನ್ನು ಗೌರವಿಸಿ ಶುಭಹಾರೈಸಿದರು.

Also Read  ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ

error: Content is protected !!
Scroll to Top