(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಮಂಡ್ಯ ಜಿಲ್ಲೆ ಕೃಷಿ ಅಧಿಕಾರಿಗಳು ಕೃಷಿ ಸಚಿವರ ವಿರುದ್ಧ ಬರೆದಿದ್ದಾರೆ ಎನ್ನಲಾದ ಪತ್ರದ ಕುರಿತು CID ತನಿಖೆ ನಡೆಸಲು ತೀರ್ಮಾನಿಲಾಗಿದೆ.
ಗೃಹ ಸಚಿವ ಡಾ.ಜಿ ಪರಮೇಶ್ವರ್ ಜತೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಆದೇಶಿಸಿದ್ದಾರೆ ಎನ್ನಲಾಗಿದೆ. ಅದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರಿಗೆ ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
Also Read ಶೀಘ್ರದಲ್ಲೇ ಬರಲಿದೆ ಹೆಚ್ಡಿಕೆ ಮಾಲಕತ್ವದ ಕ್ಯಾಬ್ ಸರ್ವೀಸ್ ► 'ನಮ್ಮ ಟೈಗರ್' ಆ್ಯಪ್ ಆಧಾರಿತ ಕ್ಯಾಬ್ ಸೇವೆ