(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಇಂದು ಬೆಂಗಳೂರಿನಲ್ಲಿರುವ ಸಿಎಂ ಕೃಷ್ಣಾ ನಿವಾಸದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು ಮುಖ್ಯಮಂತ್ರಿಯವರನ್ನು ಭೇಟಿಯಾಗಿ, ತಾವು ಎದುರಿಸುತ್ತಿರುವ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ಬಿಬಿಎಂಪಿ ಕಾಮಗಾರಿಗಳ ಬಿಲ್ ಬಿಡುಗಡೆ ಕುರಿತು ಸಿಎಂಗೆ ಮನವಿ ಮಾಡಿದ ಅವರು, ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಉಳಿದಿದೆ. ಚುನಾವಣೆ ಹಾಗೂ ಹೊಸ ಸರ್ಕಾರ ರಚನೆಯ ಕಾರಣಗಳಿದಾಗಿ 8 ತಿಂಗಳಿನಿಂದ ಬಾಕಿಯಿರುವ ಮೊತ್ತ ಇನ್ನೂ ಬಿಡುಗಡೆಯಾಗಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಿದ್ದರಾಮಯ್ಯ ಅವರ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ ಎಂದು ಸಂಘದ ಅಧ್ಯಕ್ಷ ಆರ್. ಅಂಬಿಕಾಪತಿ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.