ಅಮಿತ್‌ ಶಾ ಭೇಟಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 08. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.


ವಿಧಾನಸಭೆ ಹಾಗೂ ವಿಪಕ್ಷ ನಾಯಕರ ಹೆಸರನ್ನು ಅಂತಿಮಗೊಳಿಸಲು ವರಿಷ್ಠರ ಕರೆಯ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರದಂದು ವರಿಷ್ಠರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಅಮಿತ್ ಶಾ ಅವರನ್ನು ಭೇಟಿಯಾಗಿ ಬೊಮ್ಮಾಯಿ ಅವರು ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಬೊಮ್ಮಾಯಿ ಅವರು ಪ್ರತಿಪಕ್ಷ ನಾಯಕನ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದು, ಅವರ ದೆಹಲಿ ಭೇಟಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

Also Read  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹ ಸಚಿವರ ಭೇಟಿ

error: Content is protected !!
Scroll to Top