ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!! – 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ತ್ವರಿತ ವಿಶೇಷ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಬ್ರಹ್ಮಾವರ ತಾಲೂಕು ಬಾಳಕುದ್ರು ನಿವಾಸಿ ಅಶೋಕ್ ಎ. (32) ಶಿಕ್ಷೆಗೆ ಗುರಿಯಾಗಿರುವ ಆರೋಪಿ ಎಂದು ತಿಳಿದುಬಂದಿದೆ.

15ರ ಹರೆಯದ ಬಾಲಕಿಯನ್ನು ಪರಿಚಯ ಮಾಡಿಕೊಂಡ ಅಶೋಕ್, ಶಾಲೆಗೆ ಹೋಗುವ ಸಮಯ ಆಕೆಯನ್ನು ತನ್ನ ಕಾರಿನಲ್ಲಿ ಬಲತ್ಕಾರವಾಗಿ ಇನ್ನೋರ್ವ ಆರೋಪಿಯ ಮನೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಬಲತ್ಕಾರವಾಗಿ ಆಕೆಯೊಂದಿಗೆ ದೈಹಿಕ ಸಂಪರ್ಕ ಮಾಡಿ ನಂತರ ಆಕೆಯನ್ನು ವಾಪಾಸ್ಸು ಮನೆಗೆ ಬಿಟ್ಟಿದ್ದನು. ಇದೇ ವೇಳೆ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು ಎನ್ನಲಾಗಿದೆ. ಈ ಕುರಿತು ಮನೆಯವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಅದರಂತೆ ತನಿಖೆ ನಡೆಸಿದ ಆಗಿನ ಡಿವೈಎಸ್ಪಿ ಜೈಶಂಕರ್ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು ಎಂದು ಎನ್ನಲಾಗಿದೆ.

Also Read  ರಾತ್ರೋ ರಾತ್ರಿ ಅಕ್ರಮವಾಗಿ ಕಾರಿನಲ್ಲಿ ಗೋ ಸಾಗಾಟ ➤ ಭಜರಂಗಿಗಳ ದಾಳಿ, ತಪ್ಪಿಸಿಕೊಳ್ಳುವ ಬರದಲ್ಲಿ ಗೋ ಕಳ್ಳರ ಕಾರು ಪಲ್ಟಿ

error: Content is protected !!
Scroll to Top