ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ..!!

(ನ್ಯೂಸ್ ಕಡಬ)newskadaba.com ರಾಯಚೂರು, ಆ.09. ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಬಳಿ ಸಂಭವಿಸಿದೆ.

ಹೊಲದಲ್ಲಿ ಈ ಮಹಿಳೆಯ ಮೃತದೇಹ ಕಂಡುಬಂದಿದ್ದು, ಕೊಲೆಗೀಡಾದ ಮಹಿಳೆ 30 ರಿಂದ 35 ವಯಸ್ಸಿನವಳು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಎಸೆದು ಹೋಗಿದ್ದಾರೆ. ಬೆಳಗಿನ ಜಾವ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬೆರಳಚ್ಚು ತಜ್ಞರು, ಶ್ವಾನ ದಳದಿಂದ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಸಿದ್ದಾರೆ.

Also Read  ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

ಮಹಿಳೆಯ ಮುಖ, ಗುರುತು ಪತ್ತೆಯಾಗದಂತೆ ಯಾವ ಕೆಮಿಕಲ್ ಬಳಸಿರಬಹುದು ಅಥವಾ ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತವಾಗಿದೆ. ಸದ್ಯ ಮಹಿಳೆಯ ಗುರುತು ಪತ್ತೆಯಾಗಿಲ್ಲ‌. ಘಟನಾ ಸ್ಥಳಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.

 

 

error: Content is protected !!
Scroll to Top