KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ತುಮಕೂರು, ಆ.09. ಕೆಎಸ್‌ಆರ್​ಟಿಸಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಮೃತರನ್ನು ಜೋಗೇನಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಎಂದು ಗುರುತಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್​ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದೆ. ಆಟೋದಲ್ಲಿ ಗೌರಿಬಿದನೂರುನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಮಹಿಳೆಯರು ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದ್ದು, 9 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಮಂಗಳೂರು ➤ರೈಲ್ವೇ ನಿಲ್ದಾಣದಲ್ಲಿ ತಪಾಸಣೆ

error: Content is protected !!
Scroll to Top