ಫ್ಲ್ಯಾಟ್ ನಲ್ಲಿದ್ದ ಚಿನ್ನಾಭರಣವನ್ನು ದೋಚಿದ ಪತಿರಾಯ – ದೂರು ದಾಖಲು

(ನ್ಯೂಸ್ ಕಡಬ)newskadaba.com  ಮಂಗಳೂರು, ಆ.09. ಫ್ಲ್ಯಾಟ್‌ನ ಕಪಾಟಿನಲ್ಲಿರಿಸಿದ ಚಿನ್ನಾಭರಣವನ್ನು ಪತಿಯೇ ಕಳ್ಳತನ ಮಾಡಿದ ಕುರಿತು ಕದ್ರಿ ಪೊಲೀಸ್‌ ಠಾಣೆಗೆ ಪತ್ನಿ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಪತಿ ಮತ್ತು ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಇಲಿಯಾಸ್‌ ಮತ್ತು ಪ್ರಭಾಕರ್‌ ಪ್ರಕರಣದ ಪ್ರಮುಖ ಆರೋಪಿಗಳು ಎಂದು ತಿಳಿದುಬಂದಿದೆ.

ತಾಯಿ ಮನೆ, ಪತಿ ಮನೆಯವರು ಮದುವೆ ಸಂದರ್ಭ ನೀಡಿದ ಚಿನ್ನ ಸೇರಿದಂತೆ ಒಟ್ಟು 75 ಪವನ್‌ ಚಿನ್ನವಿದ್ದು, ಅದನ್ನು ತಾವು ವಾಸಿಸುತ್ತಿದ್ದ ಕೆ.ಪಿ.ಟಿ. ವ್ಯಾಸ ನಗರದ ಶಾಂತಲಾ ಆಶಿಯಾನ ಫ್ಲಾಟ್‌ನ ಕಪಾಟಿನಲ್ಲಿ ಭದ್ರವಾಗಿ ಇರಿಸಲಾಗಿತ್ತು. ಪಿರ್ಯಾದಿದಾರರು ಮತ್ತು ಅವರ ಗಂಡನಿಗೆ ಜಗಳವಾಗಿ 2023 ರ ಏಪ್ರಿಲ್‌ ತಿಂಗಳಿನಲ್ಲಿ ಮಹಿಳೆ ಮನೆಯಿಂದ ಹೊರ ಬಂದು ತಾಯಿ ಮನೆಯಲ್ಲಿ ವಾಸವಿರುತ್ತಿದ್ದರು ಎನ್ನಲಾಗಿದೆ. ವಾರಕ್ಕೊಮ್ಮೆ ಫ್ಲಾಟ್‌ ಗೆ ಹೋಗಿ ಬರುತ್ತಿದ್ದರು. ಸುಮಾರು ಒಂದು ತಿಂಗಳ ನಂತರ ಫ್ಲ್ಯಾಟ್‌ ಗೆ ಹೋಗಿ ವಾಚ್‌ಮ್ಯಾನ್‌ ಬಳಿ ವಿಚಾರಿಸಿದಾಗ ಅವರ ಗಂಡ ಒಂದು ವಾರದಿಂದ ಫ್ಲ್ಯಾಟ್‌ಗೆ ಬಂದಿಲ್ಲ ಎಂದು ಮಾಹಿತಿ ಸಿಕ್ಕಿದೆ. ಈ ಸಂದರ್ಭ ದೂರುದಾರ ಮಹಿಳೆ ಅನುಮಾನಗೊಂಡು ಮನೆಯ ಬಂಗಾರವಿಟ್ಟ ಲಾಕರ್‌ ಕಪಾಟಿನಲ್ಲಿ ನೋಡಿದಾಗ ಲಾಕರ್‌ ಸಮೇತ ಚಿನ್ನವಿರಲಿಲ್ಲ. ತಕ್ಷಣ ಗಂಡನಿಗೆ ಕರೆ ಮಾಡಿದಾಗ ‘ನಾನು ಲಾಕರ್‌ ಸಮೇತ ಚಿನ್ನವನ್ನು ಕದ್ದುಕೊಂಡು ಹೋಗಿರುತ್ತೇನೆ. ನಿನಗೆ ಏನು ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ.

ಅಲ್ಲದೆ ಚಿನ್ನವನ್ನು ಬ್ಯಾಂಕಿನಲ್ಲಿ ಸುಮಾರು 28.5 ಲಕ್ಷಕ್ಕೆ ಅಡವಿಟ್ಟು ಹಣ ಪಡೆದುಕೊಂಡಿರುವುದಾಗಿ ಹಾಗೂ ಅದಕ್ಕೆ ಬಡ್ಡಿ ಕಟ್ಟಲು ಆಗದೇ ಪ್ರಭಾಕರ್‌ ಎಂಬವರಿಗೆ 3 ತಿಂಗಳ ಮಟ್ಟಿಗೆ ಬಡ್ಡಿಯನ್ನು ಕಟ್ಟಲು ಅನುಮತಿ ನೀಡಿರುವುದಾಗಿ ತಿಳಿಸಿದ್ದಾನೆ. ಅಡವಿಟ್ಟ ಚಿನ್ನದಲ್ಲಿ ಪ್ರಭಾಕರನು ಮೂರು ತಿಂಗಳಾಗುವ ಮೊದಲು ಸುಮಾರು 12 ಲಕ್ಷದಷ್ಟು ಚಿನ್ನವನ್ನು ಬಿಡಿಸಿ ಕರಗಿಸಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ. ಈ ಬಗ್ಗೆ ದೂರುದಾರ ಮಹಿಳೆ ಅವರು ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

 

error: Content is protected !!

Join the Group

Join WhatsApp Group