ಮೋದಿಯವರ ‘ಪಕೋಡಾ ಮಾರಾಟ ಒಂದು ಉದ್ಯೋಗವಲ್ಲವೇ’ ಹೇಳಿಕೆಗೆ ಖಂಡನೆ ► ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪಕೋಡಾ ತಿನ್ನಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.04. ಪಕೋಡಾ ಮಾರಾಟ ಮಾಡುವುದು ಒಂದು ಉದ್ಯೋಗವಲ್ಲವೇ..? ಎಂಬ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ವಿರೋಧಿಸಿ, ಪ್ರತಿಭಟನೆ ನಡೆಸಿದ ಕೆಲ ಯುವಕರು, ಬಿಜೆಪಿ ಕಾರ್ಯಕರ್ತರಿಗೆ ಪಕೋಡಾ ತಿನ್ನಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ರವಿವಾರ ನಗರದ ಅರಮನೆ ಮೈದಾನದಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆ ಸಮಾರಂಭ ಹಿನ್ನೆಲೆಯಲ್ಲಿ ನಾನಾ ಕಡೆಗಳಿಂದ ಬಸ್ ಗಳಲ್ಲಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಕೆಲ ಯುವಕರು, ಪದವೀಧರರ ವೇಶ ಹಾಕಿಕೊಂಡು ‘ಪಕೋಡಾ’ ಹಂಚಿದರು. ಪದವೀಧರ ಯುವಕರು, ಸ್ವಾಭಿಮಾನಿ ಪಕೋಡಾ ಸ್ಟಾಲ್ ತೆರೆದು, ಈರುಳ್ಳಿ ಬೋಂಡಾ, ಪಕೋಡಾ ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುವ ಮೂಲಕ ವಿದ್ಯಾವಂತ ನಿರುದ್ಯೋಗಿಗಳನ್ನು ಅಣಕಿಸುತ್ತಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿದರು. ಚುನಾವಣೆ ಸಮಯದಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಭರವಸೆ ನೀಡಿ, ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಉದ್ಯೋಗ ಸೃಷ್ಟಿ ಮಾಡಲು ವಿಫಲರಾಗಿದ್ದಾರೆ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದ್ದ ಪ್ರಧಾನಿ ಅವರು ಪಕೋಡ ಮಾರುವುದು ಉದ್ಯೋಗವಲ್ಲವೇ ಎಂದು ಪ್ರಶ್ನಿಸಿ ನಿರುದ್ಯೋಗಿ ಯುವಕರನ್ನು ಅಣಕಿಸಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.

Also Read  ಸೆಪ್ಟೆಂಬರ್‌ನಲ್ಲಿ ಹೆಚ್ಚುವರಿ ಅಕ್ಕಿ ವಿತರಣೆ ಪ್ರಯತ್ನ - ಸಚಿವ ಕೆ.ಎಚ್. ಮುನಿಯಪ್ಪ

error: Content is protected !!
Scroll to Top