ತೆಂಗಿನಕಾಯಿ ಕೀಳುವ ವೇಳೆ ಮರದಿಂದ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಆ.09. ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಪ್ರಸಿದ್ದಿ ಪಡೆದಿದ್ದ ಮಹಿಳೆ ದುರಾದೃಷ್ಟವಶಾತ್ ತೆಂಗಿನ ಮರದಿಂದಲೇ ಬಿದ್ದು ಮೃತಪಟ್ಟ ಘಟನೆ ಸವಣೂರು ಬಳಿ ನಡೆದಿದೆ.


ಮೃತರನ್ನು ಪ್ರಮೋದ್ ಬೊಳ್ಳಾಜೆ ಪತ್ನಿ ಸುಚಿತ್ರಾ (30) ಎಂದು ಗುರುತಿಸಲಾಗಿದೆ. ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಯಿ ಕೀಳುತ್ತಿರುವಾಗ ಈ ಘಟನೆ ನಡೆದಿದ್ದು, ಮಹಿಳೆಯಾಗಿ ಸುಚಿತ್ರ ರವರು ತೆಂಗಿನಕಾಯಿ ಕೀಳುವ ಕಾಯಕದಲ್ಲಿ ತೊಡಕಿಸಿಕೊಂಡಿದ್ದರಿಂದ ಅವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು.

Also Read  'ಅಗ್ನಿ ಕ್ಷಿಪಣಿ' ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                       

error: Content is protected !!
Scroll to Top