ಜೀನ್ಸ್ ಪಾರ್ಕ್ ಸ್ಥಾಪನೆಗೆ ಜಮೀನು ಗುರುತಿಸಿ – ಅಧಿಕಾರಿಗಳಿಗೆ ಸಿಎಂ ಸೂಚನೆ

(ನ್ಯೂಸ್ ಕಡಬ)newskadaba.com ಬಳ್ಳಾರಿ, ಆ.09. ಬಿಸಿಲ ನಾಡು ಗಣಿ ಜಿಲ್ಲೆ ಬಳ್ಳಾರಿಯನ್ನು ಭಾರತದ ಜೀನ್ಸ್ ರಾಜಧಾನಿಯನ್ನಾಗಿ ಮಾಡುವುದಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಚುನಾವಣಾ ಪೂರ್ವ ನೀಡಿದ ಭರವಸೆ ನನಸಾಗುವತ್ತ ಒಂದು ಹೆಜ್ಜೆ ಮುಂದಿಟ್ಟಿದ್ದು, ಜಿಲ್ಲೆಯಲ್ಲಿ ಜೀನ್ಸ್ ಜವಳಿ ಪಾರ್ಕ್ ಸ್ಥಾಪಿಸಲು ಭೂಮಿಯನ್ನು ಆಯ್ಕೆ ಮಾಡುವಂತೆ ಕರ್ನಾಟಕ ಸರ್ಕಾರವು ಬಳ್ಳಾರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಜೀನ್ಸ್ ಜವಳಿ ಪಾರ್ಕ್ ನಿರ್ಮಿಸಲು ಜಾಗವನ್ನು ಪತ್ತೆ ಹಚ್ಚಿ ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಮತ್ತು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಸೂಚಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ 5 ಗ್ಯಾರಂಟಿ ಭರವಸೆಗಳ ಹೊರತಾಗಿ, ಮಾಜಿ ಕಾಂಗ್ರೆಸ್ ಮುಖ್ಯಸ್ಥ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಬಳ್ಳಾರಿಯಲ್ಲಿ ಅಪೆರಲ್ ಪಾರ್ಕ್ ಸ್ಥಾಪಿಸಲು 5,000 ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು ಎನ್ನಲಾಗಿದೆ.

Also Read  ಮೀನಾಡಿ: ಯುವ ಬ್ರಿಗೇಡ್ ವತಿಯಿಂದ ಸ್ವಚ್ಚತಾ ಕಾರ್ಯ

 

 

error: Content is protected !!
Scroll to Top