ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ – ದಂಡ ವಸೂಲಿ.!

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 62 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ಗಳನ್ನು ವಶಪಡಿಸಿಕೊಂಡು ಸಂತೆ ಅಂಗಡಿಯವರಿಗೆ ರೂ. 700 ದಂಡ ವಿಧಿಸಲಾಯಿತು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಬಳಸಿದ್ದಲ್ಲಿ ಬಾರಿ ದಂಡವನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಲಾಗುವುದು ಎಂದು ತಿಳಿಸಲಾಯಿತು.

ನಗರಸಭೆಯ ಪೌರಾಯುಕ್ತರು, ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ ವೈಸರ್ ಹಾಗೂ ಪೌರ ಕಾರ್ಮಿಕರು ದಾಳಿಯಲ್ಲಿ ಭಾಗವಹಿಸಿದ್ದರು. 324 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು ರೂ. 58,200 ನ್ನು ದಂಡ ವಿಧಿಸಲಾಗಿದ್ದು, ಉದ್ದಿಮೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಗಳನ್ನು ಉಪಯೋಗಿಸದ ಉದ್ದಿಮೆಯನ್ನು ಹಸಿರು ಸಂಸ್ಥೆ ಎಂದು ಘೋಷಿಸಲಾಯಿತು. ಎಲ್ಲಾ ಉದ್ದಿಮೆದಾರರು ಏಕ ಬಳಕೆಯ ಪ್ಲಾಸ್ಟಿಕ್‌ ಗಳನ್ನು ಉಪಯೋಗಿಸುವುದನ್ನು ತ್ಯಜಿಸಿ ಹಸಿರು ಸಂಸ್ಥೆ ಎಂದು ಘೋಷಿಸಿಕೊಳ್ಳುವಂತೆ ಪೌರಾಯುಕ್ತರು ಸೂಚಿಸಿರುತ್ತಾರೆ.

Also Read  ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ

ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್, ರೀಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತ ದೃಷ್ಟಿಯಿಂದ ಪ್ರತಿಯೊಬ್ಬ ನಾಗರಿಕರು ಸಭೆ ಸಮಾರಂಭಗಳಲ್ಲಿ ಟೀ, ಕಾಫಿ, ತಿಂಡಿ, ಊಟಕ್ಕೆ ಬಳಸುವಾಗ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ ತ್ಯಾಜ್ಯವನ್ನು ಕಡಿಮೆ ಮಾಡಿ ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದು. ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸುವಂತೆ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

Also Read  ಟಿಪ್ಪು ಜಯಂತಿ ಆಚರಣೆಯ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯವರೆಗೆ 144 ನಿಷೇಧಾಜ್ಞೆ ಜಾರಿ

 

 

 

error: Content is protected !!
Scroll to Top