(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂತ್ರಸ್ಥೆ ವಿದ್ಯಾರ್ಥಿನಿಯಿಂದ ಸಿಐಡಿ ಪೊಲೀಸರು ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಉಡುಪಿ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು ರಾಜ್ಯ ಸರ್ಕಾರ ಹಠಾತ್ ಸಿಐಡಿಗೆ ಒಪ್ಪಿಸಿದೆ. ಸಿಐಡಿ ಡಿವೈಎಸ್ಪಿ ಮಅಂಜುಮಾಲ ನಾಯಕ್ ನೇತೃತ್ವದಲ್ಲಿ ಸಿಐಡಿ ತಂಡ ಉಡುಪಿಗೆ ಆಗಮಿಸಿ ತನಿಖೆ ಆರಂಭಿಸಿದೆ.
ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಉಡುಪಿಗೆ ಆಗಮಿಸಲಿದ್ದು, ಉಡುಪಿ ಎಸ್ಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ಅವರು ಕಾಲೇಜಿಗ ಭೇಟಿ ನೀಡಿ ಘಟನಾ ಸ್ಥಳವನ್ನು ಪರಿಶೀಲಿಸಿದರು ಎನ್ನಲಾಗಿದೆ. ನಂತರ ಸಂತ್ರಸ್ಥೆಯನ್ನು ಕಾಲೇಜಿಗೆ ಬರ ಮಾಡಿಕೊಂಡು ಆಕೆಯಿಂದ ಹೇಳಿಕೆಯನ್ನೂ ಪಡೆದರು. ಆಳೆತ್ತರದ ಗೊಂಬೆಯನ್ನು ಕಾಲೇಜಿನ ಶೌಚಾಲಯದ ಎದುರು ನಿಲ್ಲಿಸಿ ಘಟನೆಯ ಮರುಸೃಷ್ಟಿ ಮಾಡುವುದರ ಮೂಲಕ ತನಿಖೆಯನ್ನು ನಡೆಸಲಾಯಿತು. ಸಂತ್ರಸ್ಥೆ ಇನ್ನೂ ತನ್ನ ಮೇಲಾಗಿರುವ ದೌರ್ಜನ್ಯದ ಬಗ್ಗೆ ದೂರು ನೀಡಿಲ್ಲ, ಆದ್ದರಿಂದ ಆಕೆಯ ಹೇಳಿಕೆಯೇ ಈಗ ಸಿಐಡಿಗೆ ಮುಖ್ಯ ಸಾಕ್ಷ್ಯವಾಗಲಿದೆ.