(ನ್ಯೂಸ್ ಕಡಬ) newskadaba.com ಜಮ್ಮು ಕಾಶ್ಮೀರ, ಫೆ.05. ಗಡಿ ನಿಯಂತ್ರಣಾ ರೇಖೆಯ ಬಗ್ಗೆ ಪಾಕಿಸ್ತಾನಿ ಉಗ್ರರು ನಡೆಸಿದ ಅಪ್ರಚೋದಿತ ದಾಳಿಯಲ್ಲಿ ಭಾರತದ ಮೂವರು ಸೈನಿಕರು ಹುತಾತ್ಮರಾದ ಘಟನೆ ಭಾನುವಾರದಂದು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆದಿದೆ.
ಯುದ್ಧ ವಿರಾಮ ಉಲ್ಲಂಘನೆ ಮಾಡಿದ ಪಾಕಿಸ್ತಾನಿ ಉಗ್ರರು ಭಾರತದ ಮಿಲಿಟರಿ ನೆಲೆ ಮತ್ತು ಪೂಂಛ್ ಮತ್ತು ರಾಜೌರಿ ಜಿಲ್ಲೆಯ ಗ್ರಾಮದಲ್ಲಿ ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದರು. ಭಾರತದ ಸೈನಿಕರು ಪ್ರತಿದಾಳಿ ನಡೆಸಿದ್ದು, ಉಗ್ರರ ದಾಳಿಯಲ್ಲಿ 15 ವರ್ಷದ ಶಹನಾಜ್ ಬಾನೋ ಮತ್ತು ಯಾಸಿನ್ ಆರಿಫ್ ಎಂಬಿಬ್ಬರು ಗಾಯಗೊಂಡಿದ್ದಾರೆ. ಗಡಿ ನಿಯಂತ್ರಣಾ ರೇಖೆ ಮತ್ತು ಜಮ್ಮು ಅಂತಾರಾಷ್ಟ್ರೀಯ ಗಡಿಯ ಬಳಿ ಪಾಕಿಸ್ತಾನಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಈ ವರ್ಷ 9 ಭಾರತೀಯ ಭದ್ರತಾ ಸಿಬ್ಬಂದಿಗಳು ಸೇರಿದಂತೆ 17 ಜನರು ಹತರಾಗಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.