(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಆ.11. ಬಿಜೆಪಿ ಮುಖಂಡ ಅನುಜ್ ಚೌಧರಿ(34) ಅವರನ್ನು ಉತ್ತರ ಪ್ರದೇಶದ ಸಂಭಾಲ್‌ನ ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಚೌಧರಿ ಅವರು ತಮ್ಮ ಅಪಾರ್ಟ್ ಮೆಂಟ್‌ನ ಹೊರಗೆ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್ ನಲ್ಲಿ ಬಂದ ಮೂವರು ಅನೇಕ ಬಾರಿ ಗುಂಡು ಹಾರಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದು, ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಯತ್ನಿಸುತ್ತಿದ್ದಾರೆ. ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ ಎನ್ನಲಾಗಿದೆ.
