(ನ್ಯೂಸ್ ಕಡಬ)newskadaba.com ಮಂಗಳೂರು, ಆ.11. ಪ್ರಧಾನ ಮಂತ್ರಿಯವರ ಉದ್ಯೋಗ ಸೃಷ್ಟಿ ಕಾರ್ಯಕ್ರಮ (Prime Ministers Employment Generation Programme) ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ ಉದ್ಯೋಗಕ್ಕಾಗಿ ಬ್ಯಾಂಕುಗಳ ಮೂಲಕ ಸಾಲ ಸಹಾಯಧನಕ್ಕೆ ಆನ್ಲೈೆನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎನ್ನಲಾಗಿದೆ.
PMEGP ವೆಬ್ಸೈ್ಟ್ ನಲ್ಲಿ ಆನ್ಲೈಧನ್ ಮೂಲಕ ಅರ್ಜಿ ಸಲ್ಲಿಸಲು ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲಿಸಿ, ಸಂಬಂಧಿತ ಬ್ಯಾಂಕುಗಳಿಗೆ ಕಳುಹಿಸಲಾಗುವುದು. ಅರ್ಜಿ ಸಲ್ಲಿಕೆಯ ನಂತರದಲ್ಲಿನ ವಿವಿಧ ಹಂತಗಳ ಪ್ರಗತಿಯನ್ನು ಆನ್ಲೈಲನ್ ಸ್ಟೇಟಸ್ ನೋಡಬಹುದು. ಏಜೆನ್ಸಿ ಹೆಸರು ಡಿಐಸಿ ಎಂದು ನಮೋದಿಸಬೇಕು. ಹೆಚ್ಚಿನ ಮಾಹಿತಿಗೆ ಇಂಡಸ್ಟ್ರಿಯಲ್ ಎಸ್ಟೇಟ್ನಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ: 0824-2214021 ಗೆ ಕರೆ ಮಾಡಿ ಮಾಹಿತಿ ಪಡೆಯುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.