ಮಗುಚಿ ಬಿದ್ದ ಬೋರ್‌ ವೆಲ್ ಯಂತ್ರ ಸಾಗಾಟದ ಲಾರಿ – ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.11. ಬೋರ್ ವೆಲ್ ಯಂತ್ರ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ನಡೆದಿದೆ.


ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇವರನ್ನು ಸಮೀಪದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಇಳಿಜಾರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಈ ಅವಘಡ ನಡೆದಿದೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸಿದರು.

Scroll to Top