(ನ್ಯೂಸ್ ಕಡಬ)newskadaba.com ಬೆಂಗಳೂರು, ಆ. 11. ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಎನ್ನುವಂತೆ ಪ್ರತ್ಯೇಕ ಸೈಬರ್ ನೀತಿ ರೂಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಸಚಿವ ಸಂಪುಟ ಸಭೆಯಲ್ಲಿ ಪ್ರಮುಖವಾಗಿ ಹದಿನಾರು 16 ವಿಷಯಗಳ ಮೇಲೆ ಚರ್ಚೆ ನಡೆದಿದೆ. ಅದರಂತೆ, ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ಸೇರಿದಂತೆ ಅನೇಕ ಮಸೂದೆಗಳಿಗೆ ಅನುಮೋದನೆ ನೀಡಲಾಗಿದೆ ಆಂತ ತಿಳಿಸಿದರು. ರಾಮನಗರ ಜಿಲ್ಲಾ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ.ಉಷಾ ಕದರಮಂಡಲಗಿ, ಇಂದಿರಾನಗರ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಎಸ್.ಟಿ ನಾಗಮಣಿ ಲೋಕಾಯುಕ್ತ ಟ್ರ್ಯಾಪ್ನಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇವರನ್ನು ಸೇವೆಯಿಂದ ಕಡ್ಡಾಯ ನಿವೃತ್ತಿ ನಿರ್ಣಯ ಮಾಡಲು ನಿರ್ಧಾರ ಮಾಡಲಾಗಿದೆ ಅಂತ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ಪೋಕ್ಸೋ ಕೇಸಿನಲ್ಲಿ ಶಿಕ್ಷೆ ಪ್ರಕಟವಾದ ಹಿನ್ನೆಲೆಯಲ್ಲಿ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಎನ್ ಹಳ್ಳಿಗುಡಿ ಅವರನ್ನು ಸೇವೆಯಿಂದ ವಜಾಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ.